ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿದೆ. ಜುಲೈ 1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ 1,282.72 ಕೋಟಿ ರೂಪಾಯಿಯನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022
ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ಸರ್ಕಾರ ಏನು ಮಾಡ್ತಿತ್ತು? ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಕ್ರೋಶ
https://pragati.taskdun.com/politics/paycm-posterarun-singhbjp-core-committee-meeting/
ED ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ