Latest

ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಎಂಬ ಒಂದು ಅಂಶವನ್ನಿಟ್ಟುಕೊಂಡು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಂಪುಟ ಸಭೆ ಮೀಸಲಾತಿ ಹೆಚ್ಚಳಕ್ಕೆ ಅಮ್ಮತಿ ಸೂಚಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದರು.

ಎಸ್ ಸಿ ಸಮುದಾಯಕ್ಕೆ ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್ ಟಿ ಸಮುದಾಯಕ್ಕೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗುವುದು. ನ್ಯಾ.ನಾಗಮೋಹನ್ ದಾಸ್ ನೀಡಿದ್ದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಒಳಮೀಸಲಾತಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದಾಶಿವ ಆಯೋಗ ವರದಿ ಅಧ್ಯಯನ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಬೇರೆ ಬೇರೆ ಸಮುದಾಯಗಳಿಗೂ ಮೀಸಲಾತಿ ಹೆಚ್ಚಿಸುವಂತೆ ಬೇಡಿಕೆಗಳಿವೆ. ಈ ಬಗ್ಗೆಯೂ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟಿದ್ದೇನೆ; ವಾಲ್ಮೀಕಿ ಸಮುದಾಯ ಐತಿಹಾಸಿಕ ಕ್ಷಣದಲ್ಲಿದೆ ಎಂದ ಸಚಿವ ಶ್ರೀರಾಮುಲು

https://pragati.taskdun.com/politics/shriramulupressmeetreservation-increase/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button