Latest

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ; ಎಂಜಿನಿಯರ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿ ಶಕ್ತಿಸೌಧವನ್ನೇ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ.

ವಿಧಾನಸೌಧದ ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ಗೆ ಫೋನ್ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ ಇಡಲಾಗಿದೆ. ಇನೇನು ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದಷ್ಟೇ ಹೇಳಿ ಫೋನ್ ಕಟ್ ಮಾಡಿದ್ದಾನೆ. ಮುಖ್ಯಕಾರ್ಯದರ್ಶಿಯ ಕಚೇರಿ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರವೃತ್ತರಾದ ಪೊಲೀಸರು ಇಡೀ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಬಾಂಬ್, ಸ್ಫೋಟಕ ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಬಾಂಬ್ ಕರೆಯಿರಬಹುದು ಎಂದು ಪರಿಗಣಿಸಿದ್ದಾರೆ. ಆದರೆ ಬಾಂಬ್ ಕರೆ ಮಾಡಿದ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಫೋನ್ ಕಾಲ್ ಹಿಸ್ಟ್ರಿ ತೆಗೆದು ಕರೆ ಎಲ್ಲಿಂದ ಬಂದಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಸುಳಿವು ಸಿಕ್ಕಿದೆ. ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಇದೀಗ ಪ್ರಶಾಂತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ವಿಚಿತ್ರ ಹೇಳಿಕೆಗಳನ್ನು ಬಾಯ್ಬಿಟ್ಟಿದ್ದಾನೆ.

ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಪ್ರಶಾಂತ್, ಇಬ್ಬರು ಯುವತಿಯರನ್ನು ಪ್ರೀತಿಸಿ, ಇಬ್ಬರ ಜೊತೆಯೂ ಬ್ರೇಕ್ ಅಪ್ ಆಗಿದ್ದ. ಜೊತೆಗೆ ಮನೆಯವರಿಂದಲೂ ಕಡೆಗಣನೆಗೆ ಒಳಗಾಗಿದ್ದ. ಇದರಿಂದ ಇಡೀ ವ್ಯಸ್ಥೆಯೇ ಸರಿಯಲ್ಲ ಎಂಬ ಆಲೋಚನೆಗೆ ಬಂದಿದ್ದಾನೆ. ವ್ಯವಸ್ಥೆ ಬಗ್ಗೆ ಅಸಮಾಧಾನಗೊಂಡು ದುಷ್ಕೃತ್ಯಕ್ಕೆ ಮುಂದಾಗಿದ್ದು, ಈಗ ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಫೋನ್ ನಂಬರ್ ಸಂಗ್ರಹಿಸಿ, ಕಚೇರಿಗೆ ಕರೆ ಮಾಡಿ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಹೇಳಿ ಕರೆ ಕಟ್ ಮಾಡಿದ್ದಾನಂತೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ; ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು

https://pragati.taskdun.com/latest/minor-girlrape-casepocso-case/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button