Latest

ಇಂದಿನಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 10 ಹಾಗೂ 11ರಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಂದಿನಿಂದ ಕರಾವಳಿ ಪ್ರದೇಶಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಕೆಲ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಅಕ್ಟೋಬರ್ 11ರಂದು ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರ್ಗಿ,ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮಧ್ಯ ಕರ್ನಾಟದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ.

ಚೆನ್ನೈನಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿ ಖರೀದಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Related Articles

Back to top button