Latest

ಮೆರವಣಿಗೆ ವೇಳೆ ವಿದ್ಯುತ್ ದುರಂತ; ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಲಕ್ನೌ: ವಿದ್ಯುತ್ ಅವಘಡಕ್ಕೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.

ಮೆರವಣಿಗೆ ವೇಳೆ ಕೋಲಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಈ ದುರಂತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೆರವಣಿಗೆ ಗಾಡಿಯಲ್ಲಿ ಹೋಗುತ್ತಿದ್ದಾಗ ಹೈಟೆನ್ಶನ್ ವಿದ್ಯುತ್ ತಂತಿಗೆ ವಾಹನದ ಮೇಲೆ ಕಟ್ಟಲಾಗಿದ್ದ ಕೋಲು ತಗುಲಿದೆ. ಪರಿಣಾಮ ಭೀಕರ ದುರಂತ ಸಂಭವಿಸಿದೆ. ಬಹ್ರೈನ್ ದುರಂತಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಸಸ್ಪೆಂಡ್

https://pragati.taskdun.com/latest/vijayapurapolice-suspendedsiddaramaiah/

Related Articles

Back to top button