ಪ್ರಗತಿವಾಹಿನಿ ಸುದ್ದಿ; ರಾಮನಗರ: ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ,. ಅವರ ಪಾದಯಾತ್ರೆಗಳಿಂದ ಜನರ ಮೇಲೆ ಯಾವ ಪರಿಣಾಮವೂ ಬೀರಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಯಡಿಯೂರಪ್ಪ, ಭಾರತ್ ಜೋಡೋ ಯಾತ್ರೆಗೆ ಹೆದರಿ ಮೀಸಲಾತಿ ಹೆಚ್ಚಳ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, ಇಲ್ಲಿಗೆ ಬಂದು ಮನಬಂದಂತೆ ಮಾತನಾಡಿದರೆ ಲಾಭವಿಲ್ಲ. ಇಡೀ ದೇಶದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲ. ರಾಜ್ಯದಲ್ಲಿ ಉಸಿರಾಡುತ್ತಿದೆ ಅಷ್ಟೇ. ಯುಪಿಯಲ್ಲಿ ನಿಮ್ಮ ತಂಗಿ, ಮಹಿಳೆ ಎಲ್ಲರನ್ನೂ ಸೇರಿಸಿ ಪ್ರಚಾರ ಮಾಡಿದಿರಿ ಆದರೆ ಎನಾಯ್ತು? ರಾಹುಲ್ ಗಾಂಧಿ ಪಾದಯಾತ್ರೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಅಕ್ಟೋಬರ್ 11ರಿಂದ ರಾಜ್ಯಾದ್ಯಂತ ನಾವು ಪ್ರವಾಸ ಮಾಡುತ್ತಿದ್ದೇವೆ. ನಾನು ಹಾಗೂ ಸಿಎಂ ಬೊಮ್ಮಾಯಿ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ. ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಈಗಾಗಲೇ ಕೆಲವರು ನಾನೇ ಸಿಎಂ, ನಾನೇ ಡಿಸಿಎಂ ಎಂದು ಹೇಳುತ್ತಿದ್ದಾರೆ. 2023ರಲ್ಲಿ ಹೆಚ್ ಡಿ ಕೆ ಸಿಎಂ ಆಗ್ತಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಮಗನ ಮೇಲಿನ ಮಮತೆಯಿಂದ ದೇವೇಗೌಡರು ಹೇಳಿದ್ದಾರೆ. ಹಾಗೆ ಹೇಳಬೇಡಿ ಎನ್ನಲು ನಾನ್ಯಾರು? ಎಂದರು.
ಬಿಜೆಪಿ ಎಲ್ಲಾ ವರ್ಗದವರನ್ನು ಅಭಿವೃದ್ಧಿ ಮಾಡುವ ಪಕ್ಷ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಾಗುವುದು ಎಂದು ಹೇಳಿದರು.
ಜನ ಸೇವೆಗೆ ಜೀವನ ಮುಡಿಪಾಗಿಟ್ಟ ಸಂಸದ ಅಣ್ಣಸಾಹೇಬ ಜೊಲ್ಲೆ : ಕೇಂದ್ರ ಸಚಿವರ ಶ್ಲಾಘನೆ
https://pragati.taskdun.com/politics/annasaheb-jolle60th-birthdayshashikala-jolle/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ