ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೇಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಬಳಿ ನಡೆದಿದೆ.
ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದೆ. ಅಪಘಾತದ ಭೀಕರತೆಗೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರು ಎಂದು ತಿಳಿದುಬಂದಿದೆ.
ಭಾರಿ ಮಳೆ; 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
https://pragati.taskdun.com/latest/karnatakaheavy-rain2days/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ