
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಂಸಲೇಖ ಅವರನ್ನು ಬೆಂಗಳೂರಿನ ರಾಜಾಜಿನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಹಂಸಲೇಖ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ವಿಚಾರ ಅಭಿಮಾನಿಗಳಿಗೆ ಆತಂಅಕ್ಕೆ ಕಾರಣವಾಗಿದೆ. ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಹಾಗಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ತಂದಿದೆ. ಆದರೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಅನಂತಪದ್ಮನಾಭ ದೇವಾಲಯದ ಬಬಿಯಾ ಮೊಸಳೆ ಇನ್ನಿಲ್ಲ
https://pragati.taskdun.com/latest/vegetarian-crocodilekumbaleanantapadmanabha-temple/