Latest

ಕೆ ಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ನಡೆದಿದೆ.

ಮುದ್ದೆಬಿಹಾಳದ ಹುನಗುಂದ ತಾಲೂಕಿನ ಧನ್ನೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮುದ್ದೆಬಿಹಾಳದ ಹಜೈಸಾಬ್ ಬಾಗವಾನ್ (50) ಹಾಗೂ ಪರಶುರಾಮ ಕಟ್ಟಿ (45) ಮೃತರು. ಕಾರಿನಲ್ಲಿದ್ದ ಮತ್ತೋರ್ವ ರಾಜು ಚೌವ್ಹಾಣ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರಂಭದಲ್ಲಿ ಕಿಯಾ ಕಾರೊಂದು ಫೋರ್ಡ್ ಎಂಡವರ್ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

Home add -Advt

ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

https://pragati.taskdun.com/latest/music-directorhamsalekhahispitalized/

Related Articles

Back to top button