ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲ (ಎಫ್ ಎಸ್ ಎಲ್) ಸ್ಥಾಪನೆಯಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ಎಫ್ ಎಸ್ ಎಲ್ ಲ್ಯಾಬ್ ಸ್ಥಾಪನೆಗೆ ಕೋರಿ ಮನವಿ ಮಾಡಲಾಗಿತ್ತು.ಇದೀಗ ಕೇಂದ್ರ ಸರ್ಕಾರದಿಂದ ಸಮ್ಮತಿ ಪತ್ರ ಬಂದಿದೆ. ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದರು.
ಎಫ್ ಎಸ್ ಎಲ್ ಲ್ಯಾಬ್ ಗಾಗಿ ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲಿ ಜಾಗ ಪರಿಶೀಲಿಸಲಾಗಿತ್ತು. ಅಂತಿಮವಾಗಿ ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.
ಭೂತಾನ್ ನಿಂದ ಅಡಿಕೆ ಆಮದು; ಸಚಿವರ ಸಮರ್ಥನೆ:
ಎಲೆಚುಕ್ಕಿ ರೋಗ ಅಡಿಕೆ ರೈತರಿಗೆ ಮಾರಕವಾಗಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ. ಇದರಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದರು. ಇದೇ ವೇಳೆ ಕೇಂದ್ರ ಸರ್ಕಾರ ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧರಿಸಿರುವ ಕ್ರಮವನ್ನು ಸಮರ್ಥಿಸಿಕೊಂಡ ಸಚಿವರು, ಭೂತಾನ್ ನಿಂದ ಹಸಿ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅಡಿಕೆ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಹೀಗೆ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ