ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಭಾರಿ ಮಳೆ ಎಚ್ಚರಿಕೆ ನೀಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಲಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆ ಹಲವೆಡೆಗಳಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದು, ಇಂದು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ. ಬೆಂಗಳೂರು ಗ್ರಾಮಾಂತರದಲ್ಲಿಯೂ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದ್ದು, ಉಳಿದ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ.
ಧಾರವಾಡ ಬಳಿ ಭೀಕರ ಅಪಘಾತ: ಮುನವಳ್ಳಿ ಯುವ ಕಾಂಗ್ರೆಸ್ ಅಧ್ಯಕ್ಷ ಯಶವಂತ ಯಲಿಗಾರ ಸೇರಿ ಇಬ್ಬರು ಬಲಿ
https://pragati.taskdun.com/latest/youth-congress-president-yashwant-yaligara-died-in-an-accident/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ