ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಇದೇ ವೇಳೆ ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರನ್ನು ರಾಜಸ್ಥಾನ ಹೈಕೋರ್ಟ್ಗೆ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ.
ನ್ಯಾಯಮೂರ್ತಿ ಎ.ಎಂ. ಮ್ಯಾಗ್ರೆ ಅವರನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿರುವ ಪ್ರಸನ್ನ ವರಾಲೆ ಅವರು 1962 ಜೂನ್ 23, ರಂದು ನಿಪಣಿಯಲ್ಲಿ ಜನಿಸಿದ ಜಸ್ಟಿಸ್ ಪ್ರಸನ್ನ ವರಾಲೆ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠಾ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದರು. 1985 ರ ಆ. 12ರಂದು ವಕೀಲ ವೃತ್ತಿಗೆ ಪಾದಾರ್ಪಣೆ ಮಾಡಿದರಲ್ಲದೆ, ವಕೀಲ ಎಸ್. ಎನ್. ಲೋಯಾ ಅವರ ಚೇಂಬರ್ ಸೇರಿ ಸಿವಿಲ್ ಮತ್ತು ಕ್ರಿಮಿನಲ್ ಕಾನೂನು ಅಭ್ಯಾಸ ಮಾಡಿದರು.1990 ರಿಂದ 1992 ರವರೆಗೆ ಔರಂಗಾಬಾದ್ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.
ಜಸ್ಟಿಸ್ ವರಾಲೆ ಅವರು ಔರಂಗಾಬಾದ್ನ ಬಾಂಬೆ ಹೈಕೋರ್ಟ್ ಬೆಂಚ್ನಲ್ಲಿ ಸಹಾಯಕ ಸರಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ಮತ್ತು ಯೂನಿಯನ್ ಆಫ್ ಇಂಡಿಯಾದ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅವರು, 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ಗೆ ICC ಛೀಮಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ