ಅ.14 ರಂದು ಬೈಲಹೊಂಗಲ, ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಭೇಟಿಗೆ ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.
ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.
ಈ ಎರಡೂ ತಾಲ್ಲೂಕಿನ ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://pragati.taskdun.com/belgaum-news/cinematic-death-of-bailahongala-girl-everything-is-a-mystery/
https://pragati.taskdun.com/latest/hijab-ban-issue-supreme-court-delivers-split-judgement/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ