ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ನಿರಾಣಿ, ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತಕ್ಷಣಕ್ಕೆ ವಿಚಾರಣೆ ಕೈಗೆತ್ತಿಕೊಳ್ಳಲು ಸಿಜೆಐ ಯು.ಯು.ಲಲಿತ್ ನಿರಾಕರಿಸಿದ್ದು, ಬೇರೊಂದು ಪೀಠಕ್ಕೆ ವಿಚಾರಣೆ ವರ್ಗಾವಣೆ ಮಾಡಿದ್ದಾರೆ. ಅಲ್ಲದೇ ದೀಪಾವಳಿ ಬಳಿಕ ಅರ್ಜಿ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.
ಮುಂದಿನ ತಿಂಗಳು ಮುಖ್ಯನ್ಯಾಯಮೂರ್ತಿಗಳು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಹೊರತಾದ ಮತ್ತೊಂದು ಪೀಠದಲ್ಲಿ ವಿಚಾರಣೆ ನಡೆಸುವಂತೆ ಪಟ್ಟಿ ಮಾಡುವಂತೆ ಸೂಚಿಸಿದ್ದಾರೆ. ದೀಪಾವಳಿ ಬಳಿಕ ಬೇರೊಂದು ಪೀಠದಲ್ಲಿ ವಿಚಾರಣೆ ಆರಂಭವಾಗಲಿದೆ.
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ಮೊದಲ ಪ್ರಕರಣ; ಆರೋಪಿ ಬಂಧನ
https://pragati.taskdun.com/latest/conversion-caseaccused-arrestedfirst-case-in-karnataka/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ