ಪ್ರಗತಿವಾಹಿನಿ ಸುದ್ದಿ; ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಸೌಥ್ ವೇಲ್ಸ್ ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರ ಮೇಲೆ ಸ್ಥಳೀಯ ವ್ಯಕ್ತಿಯೊಬ್ಬ ಬರ್ಬರವಾಗಿ ಚಾಕುವಿನಿಂದ 11 ಬಾರಿ ಇರಿದಿದ್ದಾನೆ.
ಶುಭಂ ಗಾರ್ಗ್ ಎಂಬುವವರು ಇರಿತಕ್ಕೊಳಗಾದ ಭಾರತೀಯ ವಿದ್ಯಾರ್ಥಿ. ಶುಭಂ ಅವರು ಸಿಡ್ನಿಯ ವಿಶ್ವ ವಿದ್ಯಾಲಯದಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದರು. ಸಧ್ಯ ಶುಭಂ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಜನಾಂಗೀಯ ದ್ವೇಷದ ಕಾರಣಕ್ಕೆ ಶುಭಂ ಮೇಲೆ ದಾಳಿ ಮಾಡಲಾಗಿದೆ ಎಂದು ಶುಭಂರ ಕುಟುಂಬದವರು ಆರೋಪಿಸಿದ್ದಾರೆ.
ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡ್ನಿ ಪೊಲೀಸರು 27 ವರ್ಷದ ಸ್ಥಳಿಯ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬರೊಬ್ಬರಿ 18 ಶಾಸಕರನ್ನು ಹನಿಟ್ರ್ಯಾಪ್ ಗೆ ಕೆಡವಿದ್ದ ಯುವತಿ ಅರೆಸ್ಟ್
https://pragati.taskdun.com/crime/honey-trap-accused-woman-who-was-blackmailing-political-leaders-arrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ