ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ಭಾರತ್ ಬಯೋಟೆಕ್ನ ಅಧ್ಯಕ್ಷ ಡಾ. ಕೃಷ್ಣ ಎಂ. ಎಲ್ಲ ಅವರನ್ನು ಹೈದರಾಬಾದ್ನಲ್ಲಿ ಶುಕ್ರವಾರ ಭೇಟಿಯಾದರು.
ನಗರದ ಖಾಸಗಿ ಹೋಟೆಲ್ನಲ್ಲಿ ಕೃಷ್ಣ ಅವರ ಜತೆ ಮಾತುಕತೆ ನಡೆಸಿದ ಸಚಿವರು, “ಸುಲಲಿತ ವ್ಯವಹಾರಕ್ಕೆ ಒತ್ತು ನೀಡುವ ಕರ್ನಾಟಕದಲ್ಲಿ ಹೂಡಿಕೆದಾರರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಬದ್ಧ,” ಎಂದು ಭರವಸೆ ನೀಡಿದರು.
ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೆ ಕೃಷ್ಣ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದರು.
“ಉದ್ಯಮಕ್ಕೆ ಪೂರಕ ವಾತಾವರಣ ಇರುವ ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಉದ್ದೇಶ ಇದೆ,” ಎಂದು ಕೃಷ್ಣ ತಿಳಿಸಿದರು.
ಕೊವ್ಯಾಕ್ಸ್ ಉತ್ಪಾದಿಸುವ ಭಾರತ್ ಬಯೋಟೆಕ್ನ ಘಟಕ ಮಾಲೂರಿನಲ್ಲಿದೆ.
ಸಮಾವೇಶದ ಪೂರ್ವಭಾವಿಯಾಗಿ ಹೈದರಾಬಾದ್ನಲ್ಲಿ ಕೈಗೊಂಡಿರುವ ರೋಡ್ಶೋನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪುಣ್ಯಕೋಟಿ ಯೋಜನೆಗೆ ಸರಕಾರಿ ನೌಕರರಿಂದ 100 ಕೋಟಿ ದೇಣಿಗೆ; ಒಂದು ದಿನದ ಸಂಬಳ ನೀಡಲು ನಿರ್ಧಾರ
https://pragati.taskdun.com/latest/karnataka-government-employeests-donate-100-crore-for-punyakoti-project/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ