Kannada NewsLatest

ಸಚಿವಾಕಾಂಕ್ಷಿಗಳಿಗೆ ಸಧ್ಯದಲ್ಲೇ ಶುಭ ಸುದ್ದಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಸನ್ನಿಹಿತವಾಗಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ಬಗ್ಗೆ ಸ್ವತ: ಮುಖ್ಯಮಂತ್ರಿಗಳು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ ಈ ಬಾರಿ ಸಚಿವ ಸಂಪುಟದಲ್ಲಿ ಸಿಹಿ ಸಿಗುತ್ತದೆಯಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಂದಿನ ದಿನಗಳಲ್ಲಿ ನಿಮಗೆ ತಿಳಿಯುತ್ತದೆ ಕಾಯಿರಿ ಎಂದರು.

ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ನಿರ್ಧರಿಸಲಾಗುವುದು. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿ ಶುಭ ಸಿದ್ದಿ ಸಿಗಲಿದೆ. ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತಿದ್ದೇನೆ. ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದೆ. ಜನಸಂಕಲ್ಪ ಯಾತ್ರೆ ನಡುವೆಯೇ ಸಧ್ಯದಲ್ಲೇ ದೆಹಲಿಗೆ ತೆರಳುತ್ತಿದ್ದೇನೆ. ವರಿಷ್ಠರ ಜೊತೆಗೆ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತೇನೆ. ಒಟ್ಟಾರೆ ಸಚಿವಾಕಾಂಕ್ಷಿಗಳಿಗೆ ಸುಭ ಸುದ್ದಿ ಸಿಗಲಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಈಗಾಗಲೇ ಕನ್ನಡ ಸಂಬಂದಿಸಿದಂತೆ ಭವನಗಳು ಇವೆ. ಕನೇರಿಮಠದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು ಹೊಸತೇನಲ್ಲ. ಈ‌ ವಿಚಾರದಲ್ಲಿ ರಾಜ್ಯ ಮತ್ತು ಭಾಷೆ ಅಡಚಣೆಯಾಗಬಾರದು ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಯಿಸಿದರು.

ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಆಚರಣೆ ಮಾಡುತ್ತಿರುವುದು ಸಂತೋಷವಾಗಿದೆ. ಅವರ ಸುಧೀರ್ಘವಾದ ನಾಲ್ಕು ದಶಕಗಳಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ, ಸಕ್ಕರೆ ಕಾರ್ಖಾನೆ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿ ಜನರಿಗೆ ಸಹಾಯ ಮಾಡಿ ಜನಪ್ರೀಯರಾಗಿದ್ದಾರೆ ಮತ್ತು ನಿರಂತರವಾಗಿ ಕೆಲಸ ಮಾಡುವ ಶಕ್ತಿ ಅವರಲ್ಲಿದೆ. ಸ್ನೇಹ ‌ಜೀವಿ ಎಂದರು.

ಕಾಂಗ್ರೆಸ್ ನಿಂದ ಬಳ್ಳಾರಿ ಜನರಿಗೆ ಮೋಸ; ಸಿಎಂ ಬೊಮ್ಮಾಯಿ ವಾಗ್ದಾಳಿ

https://pragati.taskdun.com/politics/bharath-jodo-yatrecm-basavaraj-bommaireaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button