ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ.18ರಂದು ಕರಾವಳಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ.18ವರೆಗೂ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಧ್ಯಾಹ್ನದ ನಂತರ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಇಂದು ಮುಂಜಾನೆಯಿಂದಲೆ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ. ವಾಹನ ಸಂಚಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದ್ರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಧ್ಯರಾತ್ರಿ ಭೀಕರ ಅಪಘಾತ: 5 ಮಕ್ಕಳು ಸೇರಿ 9 ಮಂದಿ ದುರ್ಮರಣ
https://pragati.taskdun.com/latest/9-death-in-an-accident/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ