Kannada NewsLatest

ಕಿತ್ತೂರು ಉತ್ಸವ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ವಿಶೇಷ ಸಂಗತಿಯಾಗಿದೆ ಎಂದರು.

ಈ‌ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಕಿತ್ತೂರು ಚೆನ್ನಮ್ಮನ ಉತ್ಸವವನ್ನು ಆಚರಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವತಃ ಮುತುವರ್ಜಿ ವಹಿಸಿ ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಹೆಚ್ಚಿನ ಅನುದಾನ ನೀಡಿರುತ್ತಾರೆ. ಅ.23 ರಿಂದ 25 ರವರೆಗೆ ಮೂರುದಿನಗಳ ಕಾಲ ಚನ್ನಮ್ಮನ ಕಿತ್ತೂರಿನಲ್ಲಿ ಅದ್ಧೂರಿ ಉತ್ಸವ ನಡೆಯಲಿದೆ. ಇದಕ್ಜೆ ಸಂಬಂಧಿಸಿದಂತೆ ಅಲ್ಲಿನ ಶಾಸಕರ ನೇತೃತ್ವದಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಅನಿಲ್ ಬೆನಕೆ ತಿಳಿಸಿದರು.

ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಎಂ.ಜಿ.ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ, ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಯ ಮುಖಂಡರಾದ ಅನಂತಕುಮಾರ್ ಬ್ಯಾಕೂಡ್, ಕಸ್ತೂರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಾಸಕ ಅನಿಲ್ ಬೆನಕೆ ಸೇರಿದಂತೆ ಎಲ್ಲ ಗಣ್ಯರು ಚೆನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ‌ಮಾಡಿದರು.

ನಂತರ ನಡೆದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಇಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ ಬಳಿಕ ಸೋಮವಾರ ಬೆಳಿಗ್ಗೆ ಚೆನ್ನಮ್ಮನ ಹುಟ್ಟೂರು ಕಾಕತಿಗೆ ವೀರಜ್ಯೋತಿ ಪ್ರಯಾಣ ಬೆಳೆಸಲಿದೆ.

ಕಲ್ಯಾಣರಾವ ಮುಚಳಂಬಿ ಸಾಮಾನ್ಯ ವ್ಯಕ್ತಿ ಅಲ್ಲ ಸಾಂಸ್ಕೃತಿಕ ವ್ಯಕ್ತಿ: ಡಾ.ಸಿದ್ದರಾಮ ಮಹಾಸ್ವಾಮಿಗಳು

https://pragati.taskdun.com/latest/kalyanarava-muchalambisneha-setu-book-relesekalyana-shree-award/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button