Latest

ಶಿಕ್ಷಕರ ವರ್ಗಾವಣೆಗೆ 15 ಸಾವಿರ ರೂ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ BEO

ಪ್ರಗತಿವಾಹಿನಿ ಸುದ್ದಿ, ಚಿಕ್ಕಮಗಳೂರು: ಶಿಕ್ಷಕರೊಬ್ಬರನ್ನು ವರ್ಗಾವಣೆ ಮಾಡಲು 15 ಸಾವಿರ ಲಂಚ ಪಡೆಯುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಕಡೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಕೆ.ಎನ್.ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು.

ಕಡೂರು ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಒ 15 ಸಾವಿರ ರೂ ಕೇಳಿದ್ದರು.

 ಮಂಗಳವಾರ ಮಧ್ಯಾಹ್ನ ಜಿ.ತಿಮ್ಮಾಪುರ ಗೇಟ್ ಬಳಿ ಹಣ ಪಡೆಯುವಾಗ ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ಬಿಇಒ ಅವರನ್ನು ಬಂಧಿಸಿದರು.
  ಸಂಜೆ  ಅವರನ್ನ ಚಿಕ್ಕಮಗಳೂರು  ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ದಾಳಿಯಲ್ಲಿ ವೃತ್ತ ನಿರೀಕ್ಷಕರಾದ ಸಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ  ಸಿಬ್ಬಂದಿಗಳಾದ ಚೇತನ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ, ಸಲೀಂ, ಲೋಕೇಶ್ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button