ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-ಕೆ ಎಸ್ ಆರ್ ಟಿಸಿ ಸಂಸ್ಥೆ ಸಿಬ್ಬಂದಿಗಳಿಗೆ ಸಿಹಿ ಸುದ್ದಿ ನೀಡಿದೆ. ಭಾರಿ ಪ್ರಮಾಣದ ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದೆ.
ಕೆ ಎಸ್ ಆರ್ ಟಿಸಿ ಇದೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗಳಿಗೆ 50 ಲಕ್ಷ ಅಪಘಾತ ವಿಮಾ ಸೌಲಭ್ಯ ಯೋಜನೆ ಜಾರಿಗೊಳಿಸಿದೆ.
ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆ ಅಥವಾ ಅಂಗವೈಕಲ್ಯ ಅವರ ಕುಟುಂಬದವರನ್ನು ಸಂಕಷ್ಟಕ್ಕೆ ದೂಡಬಾರದು ಎಂಬ ಕಾರಣಕ್ಕೆ ಅವರ ಅವಲಂಬಿತರ ಹಿತದೃಷ್ಟಿಯಿಂದ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಎಸ್ ಬಿಐ ಡಿಜಿಎಂ ಪಂಕಜ್ ತಪ್ಲಿಯಾಲ್ ಸಹಿ ಹಾಕಿದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿರುವ ನಿಗಮದ ಸಿಬ್ಬಂದಿಗಳಿಗೆ ಪ್ರಿಮಿಯಂ ರಹಿತ ವೈಯಕ್ತಿಕ ಅಪಘಾತ ವಿಮೆಯನ್ನು ಒಳಗೊಂಡಿದೆ. ಈ ವಿಮಾ ಪಾವತಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ಪರಿಹಾರದ ಹಣ ನೀಡಲಾಗುತ್ತದೆ. ಅಪಘಾತದಲ್ಲಿ ಸಿಬ್ಬಂದಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂಪಾಯಿ ಹಣ ಹಾಗೂ ಭಾಗಶ: ಅಂಗವೈಕಲ್ಯ ಉಂತಾದಲ್ಲಿ 10 ಲಕ್ಷ ರೂಪಾಯಿ ವಿಮಾ ಪರಿಹಾರ ದೊರೆಯಲಿದೆ.
ಭೂತಕೋಲ ಹಿಂದೂ ಸಂಸ್ಕೃತಿಯಲ್ಲ; ಹೊಸ ಚರ್ಚೆ ಹುಟ್ಟುಹಾಕಿದ ನಟ ಚೇತನ್ ಹೇಳಿಕೆ
https://pragati.taskdun.com/latest/bhutakolachetanclarificationkanatara-filmreshab-shetty/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ