Karnataka NewsLatest

ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೆರವಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಕಾಯಿಲೆಗಳಿಗೆ ಒಳಗಾದ ಕ್ಷೇತ್ರದ ಒಟ್ಟು 22 ಜನರಿಗೆ ಅವರ ಆಸ್ಪತ್ರೆಯ ವೆಚ್ಚ ಭರಿಸುವ ಸಲುವಾಗಿ ಒಟ್ಟು 7.36 ಲಕ್ಷ ರೂ,ಗಳಲ್ಲಿ ವಿಂಗಡನೆ ಮಾಡಿ ಈಗಾಗಲೇ ಅವರವರ ಬ್ಯಾಂಕ್ ಖಾತೆಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜಮಾ ಮಾಡಿಸಿದ್ದಾರೆ.

ಈ ಮೂಲಕ ಅನಾರೋಗ್ಯದಿಂದ ಬಳಲುತ್ತಿರುವ ಕ್ಷೇತ್ರ ವ್ಯಾಪ್ತಿಯ ಹಲವು ಜನರಿಗೆ ಈ ಸೌಲಭ್ಯದಿಂದ ಪ್ರಯೋಜನವಾಗಿದೆ. ಸೌಲಭ್ಯ ಪಡೆದ ಫಲಾನುಭವಿಗಳು ಹಾಗೂ ಕುಟುಂಬದವರು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಜನತೆಯ ಅಹವಾಲುಗಳನ್ನು ಸ್ವೀಕರಿಸಿ, ಅಭಿವೃದ್ಧಿ ಕೆಲಸಗಳ ಕುರಿತಾಗಿ ಅವರು ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿ  ಸುದೀರ್ಘ ಕಾಲ ಜನರೊಂದಿಗೆ ಚರ್ಚೆ ನಡೆಸಿದರು.

ಹಲವು ಗಣ್ಯರು, ಸಾರ್ವಜನಿಕರು ಈ ಸಂದರ್ಭದಲ್ಲಿ ಹಾಜರಿದ್ದರು.

90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಲೋಕಾರ್ಪಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button