ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಪಿಡಿಒಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲಿಸರ ಕೈಗಿಎ ಸಿಕ್ಕಿ ಬಿದ್ದಿದ್ದಾರೆ.
ಇಬ್ಬರು ಪಿಡಿಒಗಳು ಎನ್ ಎ ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಹೊನ್ನಾಕಟ್ಟೆಯ ವಾಸು ಜಾಧವ್ ಎಂಬುವರಿಗೆ 1 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ವಾಸು ಜಾಧವ್ ಅವರಿಂದ ಹಣ ಪಡೆಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬಾಗಲಕೋಟೆ ಲೋಕಾಯುಕ್ತ ಡಿವೈ ಎಸ್ ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರು ಪಿಡಿಒಗಳನ್ನು ಬಂಧಿಸಿದ್ದಾರೆ.
ಅಕ್ಟೋಬರ್ 25ರಂದು ಸೂರ್ಯಗ್ರಹಣ ಹಿನ್ನೆಲೆ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
https://pragati.taskdun.com/latest/suryagrahanadharmasthala-kshetratimings-change/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ