Latest

ಇನ್ನೂ ಮೂರು ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದೂ ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ.

ಮಹಾರಷ್ಟ್ರದ ಘಟ್ಟ ಪ್ರದೇಶ ಹಾಗೂ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಭೀಮಾ ನದಿ ಉಕ್ಕಿ ಹರಿದ ಪರಿಣಾಮ ಹಲವು ಸೇತುವೆಗಳು ಜಲಾವೃತಗೊಂಡಿವೆ. ಮಹಾರಾಷ್ಟ್ರದ ವೀರ, ಉಜನಿ ಜಲಾಶಯಗಳಿಂದ ಭೀಮಾನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ಗಾಣಗಾಪುರ, ಘತ್ತರಗಿ ಸೇತುವೆಗಳು ಮುಳುಗಡೆಯಾಗಿವೆ. ಅಫಜಲಪುರ ಹಾಗೂ ವಿಜಯಪುರ ಮಾರ್ಗದ ಸಂಪರ್ಕ ಕಡಿತಗೊಂಡಿವೆ.

ನದಿ ಪ್ರವಾಹದಿಂದಾಗಿ ಮನೆಗಳು, ದೇವಾಲಯಗಳು, ಜಮೀನು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿದ್ದು, 30ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಪ್ರವಾಹಪರಿಸ್ಥಿತಿಯುಂಟಾಗಿದ್ದು, ಜನತೆ ಕಂಗಾಲಾಗಿದ್ದಾರೆ.

ಸರಕಾರಿ ನೌಕರಿ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ್ದ ಆರೋಪಿ ಅಂದರ್

https://pragati.taskdun.com/local/an-accused-arrested-who-cheated-other-youths-on-the-pretext-of-giving-government-job/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button