ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ವರುಣಾರ್ಭಟ ಜೋರಾಗಿದೆ.
ಇಂದು ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಚಾಮರಾಜನಗರ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅ.24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದೆ ಒಟ್ಟಾರೆ ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಮುಂದುವರೆಯಲಿದೆ.
ಬೆಳಗಾವಿ: ಇಬ್ಬರು ಆಯುರ್ವೇದ ವೈದ್ಯರಿಗೆ ಜೈಲು
https://pragati.taskdun.com/latest/two-ayurveda-doctors-sentenced-jail/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ