ಸರ್ಕಾರಿ ಶಾಲೆಗಳಿಂದ ಪ್ರತಿ ತಿಂಗಳು 100 ರೂಪಾಯಿ ದೇಣಿಗೆ; ಆಕ್ರೋಶಕ್ಕೆ ಕಾರಣವಾಯ್ತು ಶಿಕ್ಷಣ ಇಲಾಖೆ ಸುತ್ತೋಲೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್ ಡಿ ಎಂಸಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕುಡಿಯುವ ನೀರು ನಿರ್ವಹಣೆಗೆ ಮಾಸಿಕ 100ರೂಪಾಯಿಯನ್ನು ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪಡೆಯಲು ಎಸ್ ಡಿಎಂ ಸಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದು ರಾಜ್ಯ ಸರ್ಕಾರ ಶಿಕ್ಷಣದ ಹೆಸರಲ್ಲಿ ಸರ್ಕಾರಿ ಶಾಲೆಗಳಿಂದ ವಸೂಲಿಗೆ ಮುಂದಾಗಿರುವ ಕ್ರಮ ಎಂದು ಸಾರ್ವಜನಿಕರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡ ಪೋಷಕರು ತಮ್ಮ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಕಾರಣಕ್ಕೆ ಉಚಿತ ಶಿಕ್ಷಣ ದೊರೆಯುವ ಉದ್ದೇಶಕ್ಕೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನ ಕಳುಹಿಸುತ್ತಾರೆ. ಆದರೆ ಸರ್ಕಾರವೇ ಈಗ ಬಡ ಪೋಷಕರಿಂದ ವಸೂಲಿಗೆ ನಿಂತಿದೆ. ಇದು ಉಚಿತ ಹಾಗೂ ಕಡ್ಡಾಯ ಶಿಕ್ಷಣ 2009ರ ಸ್ಪಷ್ಟ ಉಲ್ಲಂಘನೆ ಎಂದು ವಿಪಕ್ಷಗಳು ಕಿಡಿಕಾರಿವೆ.
ಬೆಳಗಾವಿಯಲ್ಲಿ ಘೋರ ಘಟನೆ: ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
https://pragati.taskdun.com/latest/family-disputethree-deathbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ