ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವದತ್ತಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಅವರು ಆನಂದ ಮಾಮನಿ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ತೆರಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದೀಗ ಅವರು ಸವದತ್ತಿಗೆ ಆಗಮಿಸಿ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.
ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬನಿ ಮಿಡಿದಿದ್ದಾರೆ.
ಸತತ ಮೂರು ಬಾರಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿ, ವಿಧಾನ ಸಭೆ ಉಪಾಧ್ಯಕ್ಷರಾಗಿ ಅವರ ಕಾರ್ಯ ನಿರ್ವಹಣೆ ಅನುಕರಣೀಯ ವಾದುದು. ಅವರ ಜನಪರ ಕಾಳಜಿ ಸ್ಮರಣೀಯ ವಾದುದು. ಅವರ ನಿಧನದಿಂದ ಒಬ್ಬ ಉತ್ತಮ ರಾಜಕಾರಣಿ ಹಾಗೂ ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಈ ದುಃಖ ಮರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವು ದಾಗಿ ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.
ಆನಂದ ಮಾಮನಿ ಅನಾರೋಗ್ಯದಿಂದಾಗಿ ನಿನ್ನೆ ರಾತ್ರಿ ನಿಧನರಾದರು.
ಆನಂದ ಮಾಮನಿ ಅಂತ್ಯಕ್ರಿಯೆಗೆ ಸವದತ್ತಿಯಲ್ಲಿ ಸಿದ್ಧತೆ ನಡೆಯುತ್ತಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ವತಃ ಸವದತ್ತಿಗೆ ಬೆಳಗ್ಗೆಯೇ ತೆರಳಿದ್ದು, ಸಿದ್ಧತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ರಾಜ್ಯ ವಿಧಾನ ಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಶ್ರೀ ಆನಂದ ಮಾಮನಿ ಅವರು ನಿಧನರಾದ ಹಿನ್ನಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದೆನು.
ಓಂ ಶಾಂತಿಃ pic.twitter.com/DMcLOzC49d
— Basavaraj S Bommai (@BSBommai) October 22, 2022
ಸವದತ್ತಿ ಶಾಸಕ ಆನಂದ ಮಾಮನಿ ಇನ್ನಿಲ್ಲ
https://pragati.taskdun.com/politics/anand-mamani-nomore/
ಕಿತ್ತೂರು ಉತ್ಸವ ಮುಂದೂಡಿಕೆ – ಜಿಲ್ಲಾಧಿಕಾರಿ ಆದೇಶ
https://pragati.taskdun.com/%e0%b2%b0%e0%b2%be%e0%b2%9c%e0%b3%8d%e0%b2%af/kittur-utsava-postphoned-dc-order/
https://pragati.taskdun.com/karnataka-news/ananda-mamanis-death-is-kittur-utsav-held/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ