Latest

ಹರ್ಷ ಸಹೋದರಿ ಸೇರಿ 15 ಜನರ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವೀರ ಸಾವರ್ಕರ್ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಮೃತ ಹರ್ಷ ಸಹೋದರಿ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Home add -Advt

ತನ್ನ ಕಾರನ್ನು ಜಖಂ ಗೊಳಿಸಿದ್ದಾರೆ ಎಂದು ಆರೋಪಿಸಿ ಸೈಯದ್ ಪರ್ವೇಜ್ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅ.22ರಂದು ಸಂಜೆ ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥಾ ಆಯೋಜಿಸಲಾಗಿತ್ತು. ಬೈಕ್ ಜಾಥಾದಲ್ಲಿ ಹರ್ಷ ಸಹೋದರಿ ಅಶ್ವಿನಿ ಕೂಡ ಭಾಗವಹಿಸಿದ್ದರು. ಜಾಥಾ ವೇಳೆ ಆಜಾದ್ ನಗರದ ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ನ್ನು ಜಖಂಗೊಳಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ 15 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಎರಡು ಮದುವೆಯಾಗಿದ್ದರೂ ಇನ್ನೊಂದು ಹೆಣ್ಣಿನ ಮೇಲೆ ಕಣ್ಣು; ಸಂಬಂಧಿ ಯುವತಿ ಮೇಲೆ CPI ನಿಂದ ಅತ್ಯಾಚಾರ

https://pragati.taskdun.com/latest/chitradurgacpirape-case-file/

Related Articles

Back to top button