ಪ್ರಗತಿವಾಹಿನಿ ಸುದ್ದಿ, ಮಾಂಜರಿ : ಗಡಿ ವಿವಾದ, ಆಲಲಮಟ್ಟಿ ಜಲಾಷಯ ವಿವಾದ ಸೇರಿದಂತೆ ಕರ್ನಾಟಕ – ಮಹಾರಾಷ್ಟ್ರ ಮಧ್ಯೆಯ ಸಮಸ್ಯೆಗಳ ಕುರಿತು ಚರ್ಚಿಸಲು ನ.4ರಂದು ಉಭಯ ರಾಜ್ಯಗಳ ಉನ್ನತಮಟ್ಟದ ಸಭೆ ನಡೆಯಲಿದೆ.
ಕೊಲ್ಲಾಪುರದ ಸಿವಾಜಿ ವಿಶ್ವವಿದ್ಯಾಲ್ಯದಲ್ಲಿ ನಡೆಯುವ ಈ ಸಭೆಯಲ್ಲಿ ಎರಡೂ ರಾಜ್ಯಗಳ ರಾಜ್ಯಪಾಲರು, ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಉಭಯ ರಾಜ್ಯಗಳ ರಾಜ್ಯಪಾಲರು ಎರಡು ರಾಜ್ಯಗಳ ಗಡಿ ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿ ಈ ಸಭೆಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಅಭಿಪ್ರಾಯ ಆಲಿಸಿ, ಅಲಮಟ್ಟಿ ಜಲಾಶಯದ ಎತ್ತರ ಹೆಚ್ವಿಸುವದು ಹಾಗು ಗಡಿ ವಿವಾದದಗಳ ಕುರಿತು ಸಮಗ್ರ ಮಾಹಿತಿ ಪಡೆದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಮಾಧ್ಯಮಗಳು ವರದಿ ಮಾಡುತ್ತಿವೆ.
https://pragati.taskdun.com/latest/rajyotsava-of-kunda-city-was-sooper-even-though-the-government-did-not-hold-hands/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ