Latest

PSI ನೇಮಕಾತಿ ಹಗರಣ: First Rank ಸುಪ್ರಿಯಾ ಬಂಧನ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಮೊದಲ ರ್ಯಾಂಕಿಂಗ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಸುಪ್ರಿಯಾ ಬ್ಲೂಟೂಥ್ ಬಳಸಿ ಅಕ್ರಮವೆಸಗಿದ್ದರು ಎಂದು ತಿಳಿದುಬಂದಿದೆ. ಸುಪ್ರಿಯಾ ಬಂಧನ ಮೂಲಕ ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸುಪ್ರಿಯಾ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಿ ಗ್ರಾಮದ ನಿವಾಸಿ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ್ಯಾಂಕ್ ಪಡೆದುಕೊಂಡಿದ್ದರು.

ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ ಮನೆ

https://pragati.taskdun.com/latest/gas-cylinder-blasthublihouse/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button