Kannada NewsLatest

ಜೀವ ಬೆದರಿಕೆ; ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ ಪ್ರಮೋದ್ ಮುತಾಲಿಕ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ನನಗೆ ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ಬಿಸಾಕ್ತೀವಿ ಎಂದು ಬಾಯಿಗೆ ಬಂದಂತೆ ಕೆಟ್ಟ ಪದಗಳಿಂದ ಬೈದು ಬೆದರಿಕೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

Home add -Advt

ನನಗೆ 4-5 ಕಾಲ್ ಗಳ ಮೂಲಕ ಬೆದರಿಕೆ ಕರೆ ಬರುತ್ತಿದೆ. ಉರ್ದು ಮಿಶ್ರಿತ ಮಂಗಳೂರು ಕನ್ನಡದಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

https://pragati.taskdun.com/latest/health-departmentnew-guidlinegovt-hospitals/

Related Articles

Back to top button