ಹೆಲಿಕಾಪ್ಟರ್ ನಲ್ಲಿ ಬಂದು ಚನ್ನಮ್ಮನ ನಾಡು ಕಿತ್ತೂರು ಕೋಟೆಯ ಪವಿತ್ರ ಮೃತ್ತಿಕೆ ಸಂಗ್ರಹಸಿದ ನಾಲ್ವರು ಸಚಿವರು
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಿರುವ, 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಭವ್ಯ ಪ್ರತಿಮೆ ನವೆಂಬರ್ 11 ರಂದು ಅನಾವರಣಗೊಳಿಸಲಿದ್ದು, ಇದರ ಪ್ರಯುಕ್ತ ಶುಕ್ರವಾರ (ನ.4) ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಪವಿತ್ರ ಮೃತ್ತಿಕೆ ಯನ್ನು ಸಂಗ್ರಹಿಸಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್. ಅಶೋಕ, ಯುವಜನ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ ಅಶ್ವಥ್ ನಾರಾಯಣ ಅವರು ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿದರು.
ನಾಡ ಪ್ರಭು ಕೆಂಪೇಗೌಡರ ಕಂಚಿನ ಭವ್ಯ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಪ್ರತಿಮೆ ಅನಾವರಣಕ್ಕೆ ಐತಿಹಾಸಿಕ ಮಹತ್ವ ಹೊಂದಿರುವ ಹಾಗೂ ಧಾರ್ಮಿಕ ಕ್ಷೇತ್ರಗಳಾದ ವಿಜಯನಗರ ಜಿಲ್ಲೆಯ ಹಂಪಿ, ಕೂಡಲ ಸಂಗಮ ಮೃತಿಕೆ ಸಂಗ್ರಹಿಸಿ, ಬಳಿಕ ಬೆಳಗಾವಿಯ ಕಿತ್ತೂರು ನಾಡಿನಿಂದ ಮೃತ್ತಿಕೆ ಯನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕಿತ್ತೂರು ಸಂಸ್ಥಾನ ಕಲ್ಮಠದ ಶ್ರೀಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡ್ರ, ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ. ಬಿ. ಬೋರಲಿಂಗಯ್ಯ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಮಾಳಗಿ ಹಾಜರಿದ್ದರು.
ಕೆಂಪೇಗೌಡರ ಪ್ರತಿಮೆಗೆ ಕಿತ್ತೂರಿನ ಮಣ್ಣು ಸಂಗ್ರಹ; ಕೆಲವೇ ಕ್ಷಣಗಳಲ್ಲಿ ಬೆಳಗಾವಿಗೆ ಆಗಮಿಸಲಿದ್ದಾರೆ ಸಚಿವತ್ರಯರು
https://pragati.taskdun.com/local/ministers-arriving-to-belagavi-to-collect-soil-of-kittur-fort-for-kempegiudas-statue/
ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಹಾಡಹಗಲೇ ಬರ್ಬರ ಹತ್ಯೆ
https://pragati.taskdun.com/latest/shivasena-leadersudheer-surishoot-dead/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ