ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಕೃತ ಕಾಮಿ ಉಮೇಶ್ ರೆಡ್ದಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಉಮೇಶ್ ರೆಡ್ದಿಯನ್ನು ಕಳೆದ ಹತ್ತು ವರ್ಷಗಳಿಂದ ಬೆಳಗಾವಿ ಜೈಲಿನಲ್ಲಿ ಏಕಾಂಗಿಯಾಗಿ ಸೆರೆವಾಸದಲ್ಲಿ ಇರಿಸಲಾಗಿದೆ. ಕಾನೂನು ಉಲ್ಲಂಘಿಸಿ 10 ವರ್ಷಗಳಿಂದ ಏಕಾಂಗಿಯಾಗಿ ಸೆರೆವಾಸ ವಿಧಿಸಲಾಗಿದ್ದು, ಏಕಾಂಗಿ ಸೆರೆವಾಸ ಅಪರಾಧಿಯ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಗಲ್ಲುಶಿಕ್ಷೆ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಉಮೇಶ್ ರೆಡ್ದಿಗೆ ಮರಣದಂಡನೆ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಉಮೇಶ್ ರೆಡ್ದಿ ಕ್ಷಮಾದಾನಕ್ಕಾಗಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಈಗ ಸುಪ್ರೀಂ ಕೋರ್ಟ್ ಉಮೇಶ್ ರೆಡ್ದಿಗೆ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ