Latest

KSRTC ಬಸ್ ಗೆ ಮತ್ತೊಬ್ಬ ಬೈಕ್ ಸವಾರ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿ.ಶ್ರೀಧರ್ ಮೃತ ದುರ್ದೈವಿ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಶ್ರೀಧರ್ ಗೆ ಕೆ ಎಸ್ ಆರ್ ಟಿಸಿ ಬಸ್ ಬಸ್ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಿಂದಾಗಿ ಶ್ರೀಧರ್ ಕೋಮಾಸ್ಥಿತಿಗೆ ತಲುಪಿದ್ದರು ಎನ್ನಲಾಗಿತ್ತು.

Home add -Advt

ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು-ತಿರುಪತಿ ಮಾರ್ಗದ ಕೋಲಾರ ಡಿಪೋಗೆ ಸೇರಿದ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿತ್ತು.

ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್; ಅಪಘಾತದಲ್ಲಿ 7 ಜನರ ದುರ್ಮರಣ; ಸಿಎಂ ಸಂತಾಪ

https://pragati.taskdun.com/latest/bidartruckauto-accident7-deathcm-basavaraj-bommaicondolance/

Related Articles

Back to top button