Kannada NewsLatest

ಮತ್ತಿಬ್ಬರ ಗಡಿಪಾರು

ಪ್ರಗತಿವಾಹಿನಿ ಸುದ್ದಿ; ಬೈಲಹೊಂಗಲ: ಬೆಳಗಾವಿ ಜಿಲ್ಲೆಯಲ್ಲಿ ಮಟ್ಕಾ , ಜುಗಾರಿ ಮೊದಲಾದ ಕಾನೂನು ಬಾಹೀರ ಕೃತ್ಯಗಳಲ್ಲಿ ತೊಡಗಿರುವ ಆರೋಪಿಗಳ ಮೇಲೆ ಬಿಗಿ ಕ್ರಮ ಕೈಗೊಳ್ಳುತ್ತಿರುವ ಪೊಲೀಸರು ಮತ್ತೆ 2 ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕ್ರಮ ವಹಿಸಿದ್ದಾರೆ.

ಪೊಲೀಸ್ ಇಲಾಖೆಯ ಪ್ರಸ್ತಾವನೆಯ ಮೇರೆಗೆ ಬೈಲಹೊಂಗಲ ಉಪ ವಿಭಾಗಾಧಿಕಾರಿ 2 ಆರೋಪಿಗಳನ್ನು ಗಡಿಪಾರು ಮಾಡಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಕ್ಕುಂದದ ದೇಮಪ್ಪ ಮಲಕಪ್ಪ ಮಾದರನನ್ನು ಗದಗ ಜಿಲ್ಲೆಗೆ, ಕಿತ್ತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 3 ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗಿರುವ, ಕಿತ್ತೂರಿನ ಶಬ್ಬೀರ ಖಾಸಿಮಸಾಬ ವೀರಾಪುರನನ್ನು ಬಾಗಲಕೋಟೆ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಗೆ ಸರ್ಕಾರ ಸಿದ್ಧ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://pragati.taskdun.com/politics/vakilara-bhavanainaugurationcm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button