ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಿಪ್ಪಾಣಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಸತೀಶ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದರು.
ನಿಪ್ಪಾಣಿ ನಗರದ ಬಸ್ ನಿಲ್ದಾಣದಿಂದ ತಹಶೀಲ್ದಾರ ಕಚೇರಿಯವರಿಗೆ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ಸತೀಶ ಜಾರಕಿಹೊಳಿ ಅವರಿಗೆ ದಿಕ್ಕಾರ ಕೂಗಿ ಹಿಂದೂ ಧರ್ಮಕ್ಕೆ ಜೈ ಅಂದರು.
ಈ ವೇಳೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ. ದೇಶದ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಹೇಳಿಕೆ ಖಂಡನೀಯ. ಜನರಿಗೆ ತಪ್ಪು ಸಂದೇಶ ಕೊಟ್ಟು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಇಂತಹ ಹೇಳಿಕೆ ಯಾರು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಪ್ಪಟ ಹಿಂದೂ ಸಾಮ್ರಾಟ ನಾಡಿನಲ್ಲಿ ಹಿಂದೂ ಶಬ್ದಕ್ಕೆ ಅಪಮಾನ ಮಾಡುವುದು ಎಷ್ಟು ಸರಿ? ಅದು ನಿಪ್ಪಾಣಿಯಲ್ಲಿ ಹಿಂದೂ ಬಗ್ಗೆ ಮಾತನಾಡಿರುವುದು ಈ ಭಾಗದ ಜನರನ್ನು ಕೆರಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರ್ ರಚನೆ ಮಾಡಿರುವ ಸಂವಿಧಾನದಡಿ ನಾವೇಲ್ಲರು ನಡೆಯುತ್ತಿದ್ದೇವೆ. ಬಸವೇಶ್ವರರ ವಚನಗಳು ಮತ್ತು ಶಿವಾಜಿ ಮಹಾರಾಜರು ಒಡಾಡಿದ ಪಾವನ ಭೂಮಿ ಕರ್ನಾಟಕವಾಗಿದೆ. ಅನೇಕತೆಯಲ್ಲಿ ಏಕತೆ ಬಿಂಬಿಸುವ ಏಕೈಕ ರಾಷ್ಟ್ರ ಅದು ಭಾರತ. ಇಂತಹ ದೇಶದಲ್ಲಿ ಜಾತಿ ಬೇಧ ಇಲ್ಲ ಆದರೆ ಸತೀಶ ಜಾರಕಿಹೊಳಿ ಅವರ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಯಾರೂ ಸಹಿಸುವುದಿಲ್ಲ. ನಿಪ್ಪಾಣಿಯಲ್ಲಿ ಮಾಡಿರುವ ಕಾರ್ಯಕ್ರಮ ಸ್ವಾಗತಿಸುತ್ತೇವೆ. ಆದರೆ ಹಿಂದೂ ಧರ್ಮದ ಬಗ್ಗೆ ಮಾತನಾಡಿರುವುದು ನಾವು ಸಹಿಸುದಿಲ್ಲ ಎಂದು ಹೇಳಿದರು.
ಶಿವಾಜಿ ಮತ್ತು ಸಂಭಾಜಿ ಮಹಾರಾಜರ ಬಗ್ಗೆ ಮಾತನಾಡಬೇಕಾದರೆ ಅವರ ಪೂರ್ವಾಪರ ಇತಿಹಾಸ ತಿಳಿದು ಮಾತನಾಡಬೇಕು. ಜನರಿಗೆ ಒಳ್ಳೆಯ ಸಂದೇಶ ಕೊಡುವುದು ಬಿಟ್ಟು ಜನರಲ್ಲಿ ತಪ್ಪು ಸಂದೇಶ ನೀಡಿರುವುದು ಸರಿಯಲ್ಲ ಎಂದರು.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸತೀಶ ಜಾರಕಿಹೊಳಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಗರಸಭೆ ಅಧ್ಯಕ್ಷ ಜಯವಂತ ಬಾಟಲೆ, ಉಪಾಧ್ಯಕ್ಷ ನೀತಾ ಬಾಗಡೆ, ಬಿಜೆಪಿ ನಗರ ಘಟಕ ಅಧ್ಯಕ್ಷ ಪ್ರಣವ ಮಾನವಿ, ಗ್ರಾಮೀಣ ಘಟಕದ ಅಧ್ಯಕ್ಷ ಪವನ ಪಾಟೀಲ. ಭಂಡಾ ಘೋರ್ಪಡೆ, ಅಬಿಜೀತ ಮುದುಕುಡೆ, ಕಾವೇರಿ ಮಿರ್ಜೆ ಮುಂತಾದವರು ಇದ್ದರು.
ಇದರಲ್ಲಿ ಚರ್ಚೆ ಮಾಡುವುದೇನಿದೆ? – ಸತೀಶ್ ಜಾರಕಿಹೊಳಿಗೆ ಮಾರುತ್ತರ ನೀಡಿದ CM
https://pragati.taskdun.com/politics/what-is-there-to-discuss-cm-gave-a-reply-to-the-satish-jarakiholi/
ಸಾಹಿತಿ ಭಾಗೀರಥಿ ಹೆಗಡೆಗೆ ಪ್ರತಿಷ್ಠಿತ ಸರಳಾ ರಂಗನಾಥರಾವ್ ಪ್ರಶಸ್ತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ