ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದ ಒಳಾಂಗಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು 75 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಾಮಗಾರಿಗೆ ಪೂಜೆ ನೆರವೇರಿಸಿದರು.
ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿಸಿದ ಅವರು, ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಬಸವರಾಜ ಮ್ಯಾಗೋಟಿ, ವಿಠ್ಠಲ ಮಲ್ಲಾರಿ, ಅಶೋಕ ಸಾಳುಂಕೆ, ವಿನೋದ ಚೌಹಾಣ, ಪ್ರಕಾಶ ಯಲ್ಲಪ್ಪನವರ, ಅಡಿವೆಪ್ಪ ಬಳ್ಳೋಡಿ, ಶಿವಾನಂದ ಅಜ್ಜಪ್ಪನವರ, ಈಶ್ವರ ವಾಲಿಶೆಟ್ಟಿ, ಶಿವಗುಂಡ ಹಿತ್ತಲಮನಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ