Kannada NewsLatest

ನ.13ರಂದು ಗೋಕಾಕಲ್ಲಿ ಪಂಚಮಸಾಲಿ ಬೃಹತ್ ಸಮಾವೇಶ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನವೆಂಬರ್ 13 ರಂದು ಭಾನುವಾರ ಗೋಕಾಕ್ ನ್ಯೂ ಇಂಗ್ಲಿಷ್ ಶಾಲಾ ಆವರಣದಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಗಾಂಧಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಯನ್ನು ಸರಕಾರ ನೀಡಬೇಕು. ಹಲವಾರು ಬಾರಿ ಮೀಸಲಾತಿ ಕೊಡುವುದಾಗಿ ಸರಕಾರ ಭರವಸೆ ನೀಡಿ ನಮ್ಮ‌ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಿ.12 ರಂದು ಬೆಂಗಳೂರಿನ ವಿಧಾನಸೌಧಕ್ಕೆ 25 ಲಕ್ಷ ಪಂಚಮಸಾಲಿಗಳ ಮಹಾ ಮುತ್ತಿಗೆಯ ಅಂಗವಾಗಿ ಗೋಕಾಕನಲ್ಲಿ ಪಂಚಮಸಾಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸರಕಾರ ನಾಲ್ಕು ಬಾರಿ ಮಾತು ನೀಡಿ ಮಾತಿಗೆ ತಪ್ಪಿದೆ. ಗೋಕಾಕ ಇಡೀ ರಾಜ್ಯದಲ್ಲಿ ಪಂಚಮಸಾಲಿಗಳ ಶಕ್ತಿ ಕೇಂದ್ರ. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಂಚಮಸಾಲಿ ಸಮಾಜದವರು ಇದ್ದಾರೆ. ಜನ ಸ್ವಯಂ ಪ್ರೇರಣೆಯಿಂದ ಬೃಹತ್ ಸಮಾವೇಶವನ್ನು ಆಯೋಜಿಸಿದ್ದಾರೆ ಎಂದರು.

ಸಮಾವೇಶದಲ್ಲಿ ನಮ್ಮ ಸಮುದಾಯದ ಬಸನಗೌಡ ಪಾಟೀಲ ಯತ್ನಾಳ, ಈರಣ್ಣಾ ಕಡಾಡಿ, ಲಕ್ಷ್ಮೀ ಹೆಬ್ಬಾಳ್ಕರ್, ವಿಜಯಾನಂದ ಕಾಶಪ್ಪನವರ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ, ಗುಂಡು ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೊಲೀಸರ ಮನೆ ಮೇಲೆ ಕಳ್ಳರ ದಾಳಿ; ಹಿಡಿಯಲು ಬಂದ ASI ಮೇಲೆ ಫೈರಿಂಗ್

https://pragati.taskdun.com/latest/police-housetheft-attackfiringasisoninjured/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button