Latest

ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

21 ವರ್ಷದ ಕೀರ್ತನಾ ಮಧುಕರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಡಚಣ ಪಟ್ಟಣದ ನೇಕಾರ ಕಾಲೋನಿಯ ನಿವಾಸಿ. ಬಿ ಎಲ್ ಡಿ ಇ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ನರ್ಸಿಂಗ್ ಓದುತ್ತಿದ್ದಳು.

Home add -Advt

ಪರೀಕ್ಷೆ ಫಲಿತಾಂಶ ಬಂದಾಗ ನಿರೀಕ್ಷಿಸಿದಷ್ಟು ಅಂಕ ಬರಲಿಲ್ಲ ಎಂದು ನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಡಚಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮನೆ ಮೇಲೆ ಕಳ್ಳರ ದಾಳಿ; ಹಿಡಿಯಲು ಬಂದ ASI ಮೇಲೆ ಫೈರಿಂಗ್

https://pragati.taskdun.com/latest/police-housetheft-attackfiringasisoninjured/

Related Articles

Back to top button