ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೊಡಗು, ರಾಮನಗರ, ತುಮಕೂರು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ನವೆಂಬರ್ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮಿಂಚು, ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಮಳೆ ಆರಂಭವಾಗಿದ್ದು, ಇಂದು ಮುಂಜಾನೆಯಿಂದ ಕೆಲವೆಡೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ರಾಜಧಾನಿಯಾದ್ಯಂತ ಚಳಿ, ಮೋಡ ಕವಿದವಾತಾವರಣವಿದ್ದು, ಕೆಲವೆಡೆಗಳಲ್ಲಿ ಗಾಳಿ ಮಳೆಯಾಗುತ್ತಿದೆ.
ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
https://pragati.taskdun.com/politics/vande-bharat-trainbharat-gourav-kaashi-trainpm-modibangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ