Latest

ನಾಲ್ವರು ಎಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ತುಂಗಭದ್ರಾ ನೀರಾವರಿ ವಲಯ ಕಚೇರಿಯ ಸೂಪರಿಟೆಂಡೆಂಟ್ ಎಂಜಿನಿಯರ್ ಸೇರಿ ನಾಲ್ವರು ಎಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಯಚೂರು ಜಿಲ್ಲೆಯ ಯರಮರಸ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಾಲ್ವರು ಎಂಜಿನಿಯರ್ ಗಳು ಸಿಕ್ಕಿಬಿದ್ದಿದ್ದಾರೆ.

ಸೂಪರಿಟೆಂಡೆಂಟ್ ಎಂಜಿನಿಯರ್ ಸೂರ್ಯಕಾಂತ್, ಸಾಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾವ್ ದೇಶಪಾಂಡೆ, ಕಿರಿಯ ಎಂಜಿನಿಯರ್ ತುಕಾರಾಮ್ ಹಾಗೂ ಭಾವನಾ ಲೋಕಾಯುಕ್ತರ ಬಲೆಗೆ ಬಿದ್ದವರು.

ಬಿಲ್ ಮಾಡಿಕೊಡಲು ಬಳ್ಳಾರಿಯ ಗುತ್ತಿಗೆದಾರರೊಬ್ಬರಿಗೆ ಎಂಜಿನಿಯರ್ ಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದರು. ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ಎಸ್ ಪಿ ಸಲೀಂ ಪಾಷಾ, ಡಿವೈ ಎಸ್ ಪಿ ಕಲ್ಲೇಶಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Home add -Advt

108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

https://pragati.taskdun.com/latest/pm-modikempegowda-statuekempegowda-international-airportterminal-2inauguration/

Related Articles

Back to top button