
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ರಾಜ್ಯದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಬಿರುಗಾಳಿ, ಮೈ ಕೊರೆಯುವ ಚಳಿ ಜೊತೆಗೆ ಆಗಾಗ ಬೀಳುವ ಮಳೆಯಿಂದಾಗಿ ರಾಜಧಾನಿಯ ವಾತಾವರಣವೇ ಸಂಪೂರ್ಣ ಬದಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 14ರವರೆಗೆ ಮಳೆಯಾಗಲಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊಸ ವಿವಾದದ ಸುಳಿಯಲ್ಲಿ ಕಾಂತಾರಾ ಸಿನಿಮಾ: ಸಿನಿಮಾ ಪ್ರಕದರ್ಶನಕ್ಕೆ ತಡೆ ನೀಡುವಂತೆ ಡಿಸಿಗೆ ಮನವಿ
https://pragati.taskdun.com/%e0%b2%b0%e0%b2%be%e0%b2%9c%e0%b3%8d%e0%b2%af/kaantara-filmnew-issuedalita-sanghatanemdaivanartakaru/



