ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಸಾರ್ವಜನಿಕರ ಸಮಸ್ಯೆಯ ಕುರಿತು ಬಗೆ ಹರಿಸಲು ಹಮ್ಮಿಕೊಳ್ಳಲಾದ ಫೋನ್ ಇನ್ ಕಾರ್ಯಕ್ರಮಕ್ಕೆ ಭಾರೀ ಸ್ಪಂದನೆ ದೊರೆತಿದೆ.
ಜಿಲ್ಲೆ ವಿವಿಧ ಕಡೆಗಳಿಂದ ದೂರವಾಣಿ ಕರೆ ಮಾಡಿ ತಮ್ಮ ಸಮಸ್ಯೆಯ ಬಗ್ಗೆ ಅಳಲು ತೋಡಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಅವರು ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಬಹುತೇಕ ಅಕ್ರಮ ಸಾರಾಯಿ, ಮಟ್ಕಾ ಹಾವಳಿ ಹೆಚ್ಚಾಗಿದ್ದು ಅವುಗಳಿಗೆ ಕಡಿವಾಣ ಹಾಕಬೇಕೆಂಬ ಬೇಡಿಕೆ ಸಾರ್ವಜನಿಕರು ಇಟ್ಟರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್ಪಿ ಡಾ. ಸಂಜೀವ ಪಾಟೀಲ “ನಿಮ್ಮ ಸಮಸ್ಯೆಯನ್ನು ತ್ವರಿತ ರೀತಿಯಲ್ಲಿ ಬಗೆ ಹರಿಸಲಾಗುವುದು” ಎಂದರು.
ಕೆಲಸ ಸರಕಾರಿ ಶಾಲೆಯ ಆವರಣದಲ್ಲಿ ತಂಬಾಕು ಮಾರಾಟ ಮಾಡುವುದು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಎಸ್ಪಿ ಕೂಡಲೇ ಜಿಲ್ಲೆಯಲ್ಲಿರುವ ಶಾಲೆಗಳ ಆವರಣ ಅಕ್ಕಪಕ್ಕದಲ್ಲಿ ಸರಾಯಿ ಮಾರಾಟ, ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದರೆ ತಕ್ಷಣ ದಾಳಿ ನಡೆಸಲಾಗುವುದು ಎಂದರು.
“ಕೃಷಿ ಪಂಪ್ಸೆಟ್ಗೆ ಮೀಟರ್ ಅಳವಡಿಸಿದರೆ ನಾನೇ ಮೊದಲು ಕಿತ್ತೊಗೆಯುವೆ”
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ