ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಕಟ್ಟಿ ಬಳಿ ನಡೆದಿದೆ.
ಚಾಲಕನ ನಿಯಂತ್ರಣತಪ್ಪಿ ಕರಿಕಟ್ಟಿ ಬಳಿ ಶಾಲಾವಾಹನ ಪಲ್ಟಿಯಾಗಿದೆ. ಪರಿಣಾಮ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸವದತ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸವದತ್ತಿಯ ಕುಮಾರೇಶ್ವರ ಶಾಲೆಗೆ ಸೇರಿದ ಬಸ್ ಇದ್ದಾಗಿದ್ದು, ಶಾಲಾ ಬಸ್ ನಲ್ಲಿ ಒಟ್ಟು 38 ವಿದ್ಯಾರ್ಥಿಗಳಿದ್ದರು. ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
https://pragati.taskdun.com/politics/lakshmi-hebbalkarmavinakatti-villagearishina-kumkuma/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ