ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿಯ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿದ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ನ.14ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮೂರನೇ ಜಾಗತಿಕ ಯುದ್ಧ ಸನ್ನಿಹಿತವೆಂಬುದೇ ಸುಳ್ಳು
https://pragati.taskdun.com/article/it-is-a-lie-that-world-war-3-is-imminent/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ