
ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇಂದು ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯಲಿದ್ದು, ಮುಂಜಾಗೃತಾ ಕ್ರಮವಾಗಿ ಗೋಕಾಕ್ ನಗರದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಐವರು ಡಿವೈಎಸ್ ಪಿ, 12 ಸಿಪಿಐ, 20 ಪಿ ಎಸ್ ಐ, 31 ಎ ಎಸ್ ಐ, 400ಕ್ಕೂ ಹೆಚ್ಚು ಸಿಬ್ಬಂದಿ, 2ಕೆ ಎಸ್ ಆರ್ ಪಿ ತುಕಡಿ, 2 ಡಿಎ ಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಗೋಕಾಕ್ ನ ನ್ಯೂ ಇಂಗ್ಲೀಷ್ ಶಾಲಾ ಆವರಣದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೂ ಮುನ್ನ ರಾಯಣ್ಣ ವೃತ್ತದಿಂದ ಬೃಹತ್ ರ್ಯಾಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
https://pragati.taskdun.com/latest/national-cyclistdeathmandya/