ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಪ್ರವಾಸ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆಸಾಧ್ಯತೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ 2 ಸಲ ರಾಜಕೀಯ ಪುನರ್ಜನ್ಮ ನೀಡಿದ್ದೇ ನಾನು ಎಂದು ಹೇಳಿದ್ದಾರೆ.
ಅಂದು 2005ರಲ್ಲಿ ಚಾಮುಮ್ಡೇಶ್ವರಿಯಲ್ಲಿ ಅವರು ಗೆದ್ದಿದ್ದು ಬರಿ 200-250 ಮತಗಳಿಂದ. ಚಾಮುಂಡೇಶ್ವರಿ, ಬಾದಾಮಿಯಲ್ಲೂ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆದಿದೆ. ನಾನು ಕೊನೇ ಮೂರು ದಿನ ಬಾದಾಮಿಗೆ ಹೋಗದಿದ್ದರೆ 10 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲುತ್ತಿದ್ದರು. ಗುಳೇದಗುಡ್ಡ ಸೇರಿದಂತೆ ಹಲವೆಡೆ ಪ್ರಚಾರ ಮಾಡಿದ್ದೆ. ಸಾಕಷ್ಟು ಜನ ಸೇರಿದ್ದರು. ಬಾದಾಮಿಯಲ್ಲಿ ನನ್ನಿಂದಲೇ ಗಿದ್ದಿದ್ದು. ಇದರಲ್ಲಿ ಯಾವುದೇ ಸಂಶವಿಲ್ಲ. ನಮ್ಮ ಅಭ್ಯರ್ಥಿಯೂ 28 ಸಾವಿರ ವೋಟ್ ಗೆದ್ದಿದ್ದರು ಎಂದರು.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರವಾಗಿ ಈ ಬಗ್ಗೆ ನಾನು ಮಾತನಾಡಲ್ಲ. ಅವರು ಮಾಜಿ ಸಿಎಂ. ಸಚಿವರಾಗಿ, ಉಪಮುಖ್ಯಮಂತ್ರಿಯೂ ಆಗಿದ್ದವರು. ವಿಪಕ್ಷ ನಾಯಕರು ಅವರ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು ಎಂದು ಹೇಳಿದರು.
ಸಿದ್ದರಾಮಯ್ಯ ಅಬ್ಬೇಪಾರಿಯಾಗಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
https://pragati.taskdun.com/politics/prahlad-joshiattacksiddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ