Latest

ಇಬ್ಬರು ಸಚಿವರನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

  *ಎಲ್ಲರಿಗೂ ವಸತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ‌*
ವಸತಿ ಸಚಿವ ವಿ.‌ಸೋಮಣ್ಣ, ಸಹಕಾರ ಸಚಿವ ಎಸ್. ಟಿ.‌ ಸೋಮಶೇಖರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿಹೊಗಳಿಸಿದರು
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ವಸತಿ ಕಲ್ಪಿಸಲು ಬಹಳ ದೊಡ್ಡ ಪ್ರಮಾಣದಲ್ಲಿ ನಾವು ಕ್ರಮ ತೆಗೆದುಕೊಂಡಿದ್ದೇವೆ. 18 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ನಾನು ಐದು ಲಕ್ಷ‌‌ಮನೆ ಮಂಜೂರು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.
ಇಂದು ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಡಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.
ಹಿಂದಿನ ಕಾಂಗ್ರೆಸ್ ಸರ್ಕಾರ 2018 ರಲ್ಲಿ ಸರ್ಕಾರದ ಕೊನೆಯ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ಘೋಷಣೆ ಮಾಡಿತ್ತು.‌ 15 ಲಕ್ಷ ಮನೆ  ಘೋಷಿಸಿ, 2.500 ಕೋಟಿ ರೂ ಇಟ್ಟಿತ್ತು. ಅದರಲ್ಲಿ 1000 ಕೋಟಿ ಖರ್ಚು ಮಾಡಿದ್ದೇನೆಂದು ಘೋಷಣೆ ಮಾಡಿತ್ತು. ಅಲ್ಲದೆ ಪ್ರಧಾನಮಂತ್ರಿ ಯೋಜನೆಯನ್ನೂ ಜನರಿಂದ ದೂರ ಇಟ್ಟಿತ್ತು. ಸ್ವಪ್ರತಿಷ್ಟೆಗಾಗಿ ಒಂದು ಸರ್ಕಾರ ಜನರ ಹಿತ ಕಾಯದೇ ಅನ್ಯಾಯ ಮಾಡಿತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.
ನಮ್ಮ ಸರ್ಕಾರ ಬಂದ ಮೇಲೆ 18 ಲಕ್ಷ ಮನೆ ನಿರ್ಮಾಣ ಕಾರ್ಯ ನಡೆದಿದ್ದು, ನಮ್ಮ ಸರ್ಕಾರ ಬಂದ ಮೇಲೆ 5 ಲಕ್ಷ ಮನೆಗಳನ್ನು ನಾನು ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ತಿಳಿಸಿದರು.
ಸ್ಲಂ ಬೋರ್ಡ್ ನಿಂದ 80 ಸಾವಿರ ಮನೆ ಮಂಜೂರು ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ‌ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು ಈಗಾಗಲೇ 40 ಸಾವಿರ ಮನೆಗಳ ಹಂಚಿಕೆ  ಮಾಡಿ ಚಾಲನೆ ನೀಡಲಾಗಿದೆ. ಇದು ಕ್ರಿಯಾಶೀಲ ಸಚಿವ ಸೋಮಣ್ಣ ಅವರಿಂದ ಸಾಧ್ಯವಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಕ್ರಿಯಾಶೀಲ ಸಚಿವರಾಗಿರುವ ಎಸ್.‌ಟಿ ಸೋಮಶೇಖರ್  ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಗೆ 8,000 ಕೋಟಿ ನೀಡಲಾಗಿದ್ದು, ಅದರ ಕೆಲಸ ನಡೆಯುತ್ತಿದೆ. ಮಳೆಯಿಂದ ಸ್ವಲ್ಪ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ. ಮಳೆ ನಿಂತರೆ ಎಲ್ಲ ಕೆಲಸಗಳು ವೇಗವಾಗಿ ನಡೆಯುತ್ತವೆ.  ಒಂದು ತಿಂಗಳಲ್ಲಿ ರಸ್ತೆ ದುರಸ್ತಿ ಕೆಲಸ ವೇಗವಾಗಿ ನಡೆಯುತ್ತದೆ ಎಂದು  ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.
ದೇಶದಲ್ಲಿ ಅತಿ ಹೆಚ್ಚು ವೇಗವಾಗಿ ಬೆಳೆಯುತ್ತಿರುವ ನಗರ ಬೆಂಗಳೂರು. ಅತಿ ಹೆಚ್ಚು ಜನರು ಬೆಂಗಳೂರು ನಗರಕ್ಕೆ ಅಗಮಿಸುತ್ತಿದ್ದಾರೆ. ಪ್ರತಿ ದಿನ 5,000 ವಾಹನಗಳ ನೋಂದಣಿ ಆಗುತ್ತಿದೆ. ಹೀಗೆ ಮುಂದುವರೆದರೆ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಡಿ ಕಂಜೆಸ್ಡೆಡ್ ಮಾಡುವ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ತಿಳಿಸಿದರು.
ಶೀಘೃವೇ ಬೆಂಗಳೂರಿಗೆ ಹೊಸ ಪ್ರಸ್ತಾವನೆಯನ್ನು ಜನರ ಮುಂದೆ ಇಡುತ್ತೇವೆ. ಹಿಂದಿನ ಸರ್ಕಾರ ನಾಲ್ಕು ಪ್ಲೋರ್ ಮನೆ ಕಟ್ಟಿದರೆ ಅಕುಪೆನ್ಸಿ ಸರ್ಟಿಪಿಕೆಟ್ ಪಡೆಯಲು ಆಳುವವರ ಮನೆಗೆ ಹೋಗುವಂತೆ ಮಾಡಿದ್ದರು. ಅದನ್ನು ತೆಗೆದು ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ‌ಬೆಂಗಳೂರಿನ ಸಮಗ್ರ ಅಭಿವೃದ್ದಿಯ ಚಿತ್ರಣ ಇಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.
ಈ ಸಂದರ್ಭದಲ್ಲಿ ವಸತಿ ಸಚಿವ ವಿ.‌ಸೋಮಣ್ಣ, ಸಹಕಾರ ಸಚಿವ ಎಸ್. ಟಿ.‌ ಸೋಮಶೇಖರ್ ಮತ್ತಿತರರು ಹಾಜರಿದ್ದರು.

 *ತಂತ್ರಜ್ಞಾನ ಉಪಯೋಗ ಜನಸಾಮಾನ್ಯರಿಗೆ ತಲುಪಬೇಕು:

ಬೆಂಗಳೂರು: ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಅದರ ಪ್ರಯೋಜನ ಜನಸಾಮಾನ್ಯರಿಗೆ ತಲುಪಬೇಕು. ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿಯೂ ಎಲ್ ಇಡಿ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.
ಇಂದು ಬಿಬಿಎಂಪಿ ವತಿಯಿಂದ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಲ್ ಇಡಿ ಬೀದಿ ದೀಪಗಳ ನಿಯಂತ್ರಣ ಕೊಠಡಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ‌ ಮಾತನಾಡಿದರು.
ವಿ ಸೋಮಣ್ಣ ಅಂದರೆ, ವಿಕ್ಟರಿ ಸೋಮಣ್ಣ, ನಿಮ್ಮ ಮನಸು ಗೆದ್ದು ಚುನಾವಣೆ ಗೆಲ್ಲುವುದೇ ಸೋಮಣ್ಣ ಅವರ ಕೆಲಸ. ಅವರು ಹಿಡಿದ‌‌ ಕೆಲಸ ಮುಗಿಸುವವರೆಗೂ ಬಿಡುವುದಿಲ್ಲ. ಸೋಮಣ್ಣ ಇರುವವರೆಗೆ ನಿಮಗೆ ವಿಕ್ಟರಿ ಇದೆ. ನಮ್ಮ ಮಾಲಿಕರು ಮತದಾರರು, ನೀವು ಜಾಣತನದಿಂದ ಚುನಾವಣೆಯಲ್ಲಿ ಒಂದು ಬಟನ್ ಒತ್ತಿ ಸೋಮಣ್ಣ ಅವರನ್ನು ಆಯ್ಕೆ ಮಾಡುವ ಮೂಲಕ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿದ್ದೀರಿ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಇವತ್ತು ತಂತ್ರಜ್ಞಾನ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಅದನ್ನು ಸದುಪಯೋಗ ಪಡೆಸಿಕೊಳ್ಳದೇ ಇದ್ದರೆ ಪ್ರಯೊಜನವಿಲ್ಲ. ಇಂಟರ್ನೆಟ್, ಸೈಟಲೈಟ್  ತಂತ್ರಜ್ಞಾನ ವನ್ನು ತಂದು 20 ಸಾವಿರ ಲೈಟ್ ಗಳನ್ನು ಇಲ್ಲಿಯೇ ಕುಳಿತು ನಿಯಂತ್ರಣ ಮಾಡುವ ವ್ಯವಸ್ಥೆ  ತಂದಿದ್ದಾರೆ. ಯಾವುದೇ ಭಾಗದಲ್ಲಿ ಲೈಟ್ ಹಾನಿಗೊಳಗಾದರೆ ಅದನ್ನು 24 ಗಂಟೆಯಲ್ಲಿ ಬದಲಾಯಿಸುವ ವ್ಯವಸ್ಥೆ ಇದೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.
ಕ್ಷೇತ್ರದಲ್ಲಿ ಅನುದಾನ ಬಳಕೆ ಮಾಡುವ ಕಲೆ ಬಗ್ಗೆ ಸೋಮಣ್ಣ ಅವರಿಂದ ಕಲಿಯಬೇಕು. ಈ ಮಾದರಿಯನ್ನು ಅಳವಡಿಸಿಕೊಳ್ಳಲು ಶಾಸಕರಿಗೆ ಹೇಳಿದ್ದೇನೆ. ಅಲ್ಲದೇ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ಭಾಗಗಗಳಿಗೆ ಎಲ್ ಇಡಿ ಲೈಟ್ ವ್ಯವಸ್ಥೆ ಮಾಡಲಾಗುವುದು. ರಾಜ್ಯಾದ್ಯಂತ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.
ನೀವೆಲ್ಲ ಅದೃಷ್ಟವಂತರು ಸೋಮಣ್ಣ ಅವರದ್ದು 40 ವರ್ಷದ ಅನುಭವ. ಅವರು ನಿಮ್ಮ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ 24×7 ಸೋಮಣ್ಣ ಅಂತ ಹೆಸರು ಇಡಬೇಕು. ಅವರು ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಈ ಕೆಲಸ ಮಾಡಿದ‌ ಬಿಬಿಎಂಪಿಯವರಿಗೆ ಅಭಿನಂದನೆ ಸಲ್ಲಿಸಿ, ಕೇವಲ ನಿಮ್ಮ ಮನೆಗಳಿಗೆ ಅಲ್ಲ. ಎಲ್ಲ ಬೀದಿಗಳಿಗೆ ಬೆಳಕು ಬರಲಿ ಎಂದು ಆಶಿಸಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹರಿಸಿದರು.
ಈ ಸಂದರ್ಭದಲ್ಲಿ ವಸತಿ ಸಚಿವರಾದ ವಿ. ಸೋಮಣ್ಣ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇತರರು ಹಾಜರಿದ್ದರು.

https://pragati.taskdun.com/latest/breakin-news-the-names-of-the-three-mlas-who-will-be-ministers-are-revealed/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button