ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲಬುರ್ಗಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಜಟಾಪಟಿ, ಪೋಸ್ಟರ್ ವಾರ್ ತಾರಕಕೇರಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುತ್ತೇನೆ ಎಂದು ಗದರಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಠಿಣಕಂಠ ರಾಠೋಡ್ ಅವರನ್ನು ಹೈದರಾಬಾದ್ ನಲ್ಲಿ ಚಿತ್ತಾಪುರ ಪೊಲೀಸರು ಬಂಧಿಸಿ, ಕಲಬುರ್ಗಿಗೆ ಕರೆ ತಂದಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಕಾಂಗ್ರೆಸ್ ನ ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಿ ಶಾಸಕರು ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಅಂಟಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಮುಖಂಡರು ನನಗೆ ಕ್ಷೇತ್ರದಲ್ಲಿ ಓಡಾಡಲು ಬಿಡುತ್ತಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರಾಠೋಡ್, ಖರ್ಗೆ ಸುಳ್ಳು ಹೇಳುತ್ತಿದ್ದಾರೆ. ಅವರು ಭಾರತ್ ಜೋಡೋದಲ್ಲಿ ಪಾಲ್ಗೊಳ್ಳುವ ಮೊದಲು ಚಿತ್ತಾಪುರ ಯಾತ್ರೆ ಮಾಡಲಿ. ನಾವು ದೇಶದ ಯೋಧರಿದ್ದಂತೆ. ಪ್ರಿಯಾಂಕ್ ಖರ್ಗೆ ನನ್ನ ಮೇಲೆ ಗುಂಡು ಹಾರಿಸಲಿ ಎದುರಿಸಲು ಸಿದ್ಧ. ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾದಲು ಸಿದ್ಧ ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು.
ರಾಠೋಡ್ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಮನೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದರು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಈಗ ಚಿತ್ತಾಪುರ ಪೊಲೀಸರು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ. ಬಳಿಕ ಸ್ಟೇಷನ್ ಬೇಲ್ ಮೇಲೆ ರಾಠೋಡ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಆರೋಗ್ಯ ಶಿಬಿರಗಳ ಮೂಲಕ ಅರ್ಥಪೂರ್ಣ, ಅಗತ್ಯದ ಸಮಾಜ ಸೇವೆ ನಡೆಯಲಿ: ಲಕ್ಷ್ಮೀ ಹೆಬ್ಬಾಳಕರ
https://pragati.taskdun.com/local/mla-laxmi-hebbalkar-inaugurates-health-check-up-camp-in-sarathinagar-belagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ