ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ದೈಹಿಕ ಶಿಕ್ಷಕ ಶಂಕರಪ್ಪ ಹನುಮಗೊಂಡ ಎಂಬುವವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಕಲಬುರ್ಗಿ ಜಿಲ್ಲೆಯ ಜೇವರ್ಗಿ ಮೂಲದ ಶಂಕರಪ್ಪ, ಚಿತ್ತಾಪುರದ ಕರದಾಳದ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪಿಎಸ್ ಐ ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲ್ಯೂಟೂಥ್ ಮೂಲಕ ಉತ್ತರ ನೀಡುತ್ತಿದ್ದ ಎನ್ನಲಾಗಿದೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸಹವರ್ತಿಗಳಲ್ಲಿ ಶಂಕರಪ್ಪ ಕುದ ಒಬ್ಬರು. ಕಲಬುರ್ಗಿಯಲ್ಲಿ ಕುಳಿತು ಎಲೆಕ್ಟ್ರಾನಿಕ್ ಬ್ಲ್ಯೂ ಟೂಥ್ ಮೂಲಕ ತುಮಕೂರಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.
ಸಿದ್ದಗಂಗಾ ಮಠದಿಂದ ವಿದ್ಯಾರ್ಥಿ ನಾಪತ್ತೆ
https://pragati.taskdun.com/siddaganga-mahasslc-studentmissing/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ